
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.
ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.