
ನಾನು ಕೋಲಾರ (Kolar) ದಲ್ಲಿ ಸ್ಪರ್ಧಿಸಿದರೂ 200% ಗೆಲ್ತೀನಿ. ಆದರೆ ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕು ಅನ್ನೋದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಯವರು ಯಡಿಯೂರಪ್ಪ (B S Yediyurappa) ರನ್ನೇ ಪಂಚರ್ ಮಾಡಿದ್ದಾರೆ. ಅದಕ್ಕಾಗಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಬಿಎಸ್‍ವೈ ಬಗ್ಗೆ ನನಗೆ ಅಪಾರವಾದ ಗೌರವವಿದೆ, ಅನುಕಂಪವಿದೆ ಎಂದು ಹೇಳಿದರು.
ಕಾಂಗ್ರೆಸ್ (Congress) ನಲ್ಲಿ ಹಲವರು ಸಿಎಂ ಸ್ಥಾನದ ತಿರುಕನ ಕನಸು ಕಾಣುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾರು ಸಹ ಕನಸು ಕಾಣುತ್ತಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ವಾಸ್ತವ ಸತ್ಯಾಂಶ ಹೇಳಿದ್ದೇನೆ. ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ವಿರುದ್ಧ 40% ಗಂಭೀರ ಆರೋಪವಿದೆ. ಬಿಜೆಪಿಯ ವಚನಭ್ರಷ್ಟ, ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಹೋಗಿದ್ದರಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದರು.
ಚಾಮುಂಡೇಶ್ವರಿ (Chamundeshwari) ಯಲ್ಲಿ ನನನ್ನ ಸೋಲಿಸಲು ಬಹಳ ಪ್ರಯತ್ನ ಮಾಡಿದರು. ಆದರೆ ಬಾದಾಮಿಯಲ್ಲಿ ಜನ ನನ್ನನ್ನ ಬಹಳ ಪ್ರೀತಿಯಿಂದ ಸ್ವೀಕರಿಸಿದರು. ಕ್ಷೇತ್ರ ಬಿಡಬೇಡಿ, ನಿಮಗೆ ಓಡಾಡೊಕೆ ಕಷ್ಟವಾದ್ರೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಹೆಲಿಕಾಪ್ಟರ್ ಮಾಡುವುದಾಗಿ ಬದಾಮಿ ಜನ ಹೇಳಿದ್ದರು. ಇಂತಹ ಪ್ರೀತಿ ಯಾರಾದರೂ ಕೊಡ್ತಾರೆನ್ರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.