
ಗೋಪಿಕೃಷ್ಣ ತರೀಕೆರೆ ಶಾಸಕ – ಬಾಳೆಹಣ್ಣಿನ ಮೇಲೆ ಬರೆದು ತೇರಿಗೆ ಎಸೆದ ಅಭಿಮಾನಿಗಳು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election) ತರೀಕೆರೆ ಕ್ಷೇತ್ರದಿಂದ ಗೋಪಿಕೃಷ್ಣ ಅವರಿಗೆ ಟಿಕೆಟ್ ದೊರಕಿ, ಅವರೇ ಗೆಲ್ಲುವಂತೆ ಆಶೀರ್ವದಿಸು ತಾಯೆ ಎಂದು ಭಕ್ತರು ಬಾಳೆಹಣ್ಣಿನ ಮೇಲೆ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಹೆಸರು ಬರೆದು ರಥದ ಮೇಲೆ ಎಸೆದಿದ್ದಾರೆ.
ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಅಜ್ಜಂಪುರ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ಅಂತರಘಟ್ಟಮ್ಮನ ಜಾತ್ರೆ ನಡೆಯುತ್ತಿದೆ. ಅಂತರಘಟ್ಟಮ್ಮ ಅಂದ್ರೆ ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿನಲ್ಲಿ ಭಾರೀ ಭಯ ಹಾಗೂ ನಂಬಿಕೆ. ಈ ಜಾತ್ರೆಗೆ ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಅಭಿಮಾನಿಗಳು ಬಾಳೆಹಣ್ಣಿನ ಮೇಲೆ ತರೀಕೆರೆ ಎಂ.ಎಲ್.ಎ. ಗೋಪಿಕೃಷ್ಣ ಎಂದು ಬರೆದು ತೇರಿನ ಮೇಲೆ ಎಸೆದಿದ್ದಾರೆ.
ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಭಾರೀ ಲಾಬಿ ನಡೆಯುತ್ತಿದೆ. ಈ ಬಾರಿ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ 13 ಜನ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಮಾಜಿ ಶಾಸಕ ಜಿ. ಹೆಚ್. ಶ್ರೀನಿವಾಸ್ ಹಾಗೂ ಹೆಚ್.ಎಂ. ಗೋಪಿಕೃಷ್ಣ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದೆ.