AccidentDistrictsLatestMangalore

ಕೆಎಸ್​​ಆರ್​ಟಿಸಿ ಬಸ್​ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವು

ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ, ಕಾರೊಂದು ಓವರ್​​ಟೇಕ್ ಮಾಡುವ ವೇಳೆ ಕೆ.ಎಸ್.​​ಆರ್.​ಟಿ.ಸಿ ಬಸ್ ನಡುವೆ ಡಿಕ್ಕಿಯಾಗಿ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಮತ್ತು ಕೆ.ಎಸ್.​​ಆರ್.​ಟಿ.ಸಿ ಬಸ್ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 14 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಮರ್ಧಾಳ ಗ್ರಾಮದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು, ಮತ್ತೊಂದು ಕಾರು ಓವರ್​​ಟೇಕ್ ಮಾಡುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಕಾರಿನಲ್ಲಿದ್ದ ಇನ್ನುಳಿದ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಬಿಕ್ಕಿನಕುರಿಕೆ ಗ್ರಾಮದ ರೈತ ಹನುಮಂತರಾಯಪ್ಪ ಅವರ 4 ಎಕರೆ ಜಮೀನಿನಲ್ಲಿ ಬೆಳೆದಿದ್ದ 150 ಅಡಿಕೆ ಹಾಗೂ 400‌ ತೆಂಗಿನ ಮರಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಸುಮಾರು 25 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೆಳೆ ಬೆಂಕಿಗಾಹುತಿಯಾಗಿದ್ದು, ರೈತ ಹನುಮಂತರಾಯಪ್ಪ ಬೆಳೆಹಾನಿಯಿಂದ ಕಂಗಾಲಾಗಿದ್ದಾರೆ. ಅಗ್ನಿಶಾಮಕ ದಳದಿಂದ ಬೆಂಕಿನಂದಿಸುವ ಕಾರ್ಯ ನಡೆಯುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತ ಹನುಮಂತರಾಯಪ್ಪ ಆರೋಪಿಸಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Show More

Related Articles

Leave a Reply

Your email address will not be published. Required fields are marked *

Back to top button