LatestNationalPoliticsState

ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

d

ಹೈದರಾಬಾದ್‌: ಆಂಧ್ರಪ್ರದೇಶದ (Andhra Pradesh) ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು (Chandrababu Naidu), ಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್‌. ಅಬ್ದುಲ್‌ ನಜೀರ್‌ ಪ್ರಮಾಣವಚನ ಬೋಧಿಸಿದರು. ಒಟ್ಟು 23 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್‌ ಶಾ, ನಟ ರಜನಿಕಾಂತ್‌, ಪವನ್‌ ಕಲ್ಯಾಣ್‌ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್‌ಡಿಎ(NDA) ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡಿತ್ತು ಜಗನ್‌ ನೇತೃತ್ವದ ಸರ್ಕಾರ ಅಧಿಕಾರ ಏರಿತ್ತು.

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ಈ ಚುನಾವಣೆಗೆ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದ್ದವು.

ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

Show More

Related Articles

Leave a Reply

Your email address will not be published. Required fields are marked *

Back to top button