StateTransport

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ 50 KKRTC ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಜನತೆಯ ಸುಖಕರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗಿದೆ.

ಹೌದು ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವೇಗದೂತ ಮಾದರಿಯ ಬಸ್ಸುಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಇಂದು 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌.

ಈ ಬಸ್ಸುಗಳು ಮೇ|| ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ.

ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ. ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ, ಈ ಬಸ್ಸುಗಳಲ್ಲಿ, Fire Detection and Alarm System, Electronic Vehicle Stability Control System, ಸ್ವಯಂ ಚಾಲಿತ ಬಾಗಿಲು , ನಾಲ್ಕು ಸಿ.ಸಿ. ಕ್ಯಾಮೆರಾಗಳು, ರೀವರ್ಸ್ ಪಾರ್ಕಿಂಗ್ ಅಲರಾಮ್ ಸಿಸ್ಟಂ, ವೆಹಿಕಲ್ ಲೋಕೆಶನ್ ಟ್ರ್ಯಾಕಿಂಗ್ ಸಿಸ್ಟಂ ಹಾಗೂ ಪ್ಯಾಸೆಂಜರ್ ಇನಫಾರಮೆಶನ್ ಸಿಸ್ಟಂ & ಪ್ಯಾನಿಕ್ ಬಟನ್‌ಗಳನ್ನು ಅಳವಡಿಸಿದೆ.

Show More

Related Articles

Leave a Reply

Your email address will not be published. Required fields are marked *

Back to top button