Election NewsWorld

ಅಮೆರಿಕ: ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್(Kamala Harris) ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರು ನಿಧಿ ಸಂಗ್ರಹಣೆ ಮತ್ತು ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿದ್ದು,

ಹಲವು ರಾಜ್ಯಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಇದನ್ನು ಸಹಿಸಲಾಗದ ಯಾರೋ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಕಮಲಾ ಅವರು ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್ ಮತ್ತು ಮಿಚಿಗನ್‌ ರಾಜ್ಯಗಳಲ್ಲಿ ಶೇ.4 ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದು ಒಂದು ವಾರದ ಬಳಿಕ ಈ ಘಟನೆ ಸಂಭವಿಸಿದೆ.

ಅರಿಜೋನಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿ ಮೇಲೆ ಗುಂಡು ಹಾರಿಸಲಾಯಿತು. ರಾತ್ರಿಯ ಸಮಯದಲ್ಲಿ ಕಚೇರಿಯೊಳಗೆ ಯಾರೂ ಇರಲಿಲ್ಲ, ಆದರೆ ಇದು ಆ ಕಟ್ಟಡದಲ್ಲಿ ಕೆಲಸ ಮಾಡುವವರ ಮತ್ತು ಹತ್ತಿರದವರ ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ.

Show More

Related Articles

Leave a Reply

Your email address will not be published. Required fields are marked *

Back to top button