AggregatorStateTransport

ಓಲಾ, ಉಬರ್ ಬೈಕ್‌ ಟ್ಯಾಕ್ಸಿಗಳಿಗೆ ಸದ್ಯಕ್ಕಿಲ್ಲ ಬ್ರೇಕ್! ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಆದೇಶ‌

ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್‌ 15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ (ಏ29) ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈ. ಲಿ. & ಎಎನ್‌ಐ ಟೆಕ್ನಾಲಜೀಸ್ ಪ್ರೈ. ಲಿ. ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಬಿ.ಎಂ. ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಅರ್ಜಿಯನ್ನು ಪುರಸ್ಕರಿಸಿದೆ.

ಹೈಲೈಟ್ಸ್‌:

  1. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಕೋರ್ಟ್ ಆದೇಶ‌
  2. ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ನೀಡಿದ್ದ ಗಡುವು ವಿಸ್ತರಣೆ
  3. ನ್ಯಾ.ಬಿ.ಎಂ.ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠದಿಂದ ವಿಚಾರಣೆ bike taxi
  4. ಬೈಕ್‌ ಟ್ಯಾಕ್ಸಿ ಬಗ್ಗೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್‌ 15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಮಂಗಳವಾರ (ಏ29) ಆದೇಶ ಹೊರಡಿಸಿದೆ.

ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈ. ಲಿ. & ಎಎನ್‌ಐ ಟೆಕ್ನಾಲಜೀಸ್ ಪ್ರೈ. ಲಿ. ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ಬಿ.ಎಂ.ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿ ಅರ್ಜಿಯನ್ನು ಪುರಸ್ಕರಿಸಿದೆ.

ಬೈಕ್‌ ಟ್ಯಾಕ್ಸಿ ಸ್ಥಗಿತಕ್ಕೆ ಸೂಚಿಸಿದ್ದ ಸಚಿವ ರಾಮಲಿಂಗಾರೆಡ್ಡಿ
ಎಲ್ಲಾ ಬಗೆಯ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಏ.25ರಂದು ಸೂಚನೆ ನೀಡಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮೋಟಾರು ವಾಹನ ಕಾಯಿದೆ-1988ರ ಕಲಂ 93ರ ಅನುಸಾರ ರಾಜ್ಯ ಸರಕಾರ ಸೂಕ್ತ ಮಾರ್ಗದರ್ಶಿ ಸೂತ್ರ ರೂಪಿಸುವವರೆಗೆ ಸಂಬಂಧಿತ ಸಂಸ್ಥೆಗಳಾದ ಓಲಾ, ಉಬರ್‌ ಮತ್ತು ರಾರ‍ಯಪಿಡೊಗಳು ತಮ್ಮ ಬೈಕ್‌ ಟ್ಯಾಕ್ಸಿ ಸೇವೆಯನ್ನು ಆರು ವಾರದೊಳಗೆ ನಿರ್ಬಂಧಿಸಬೇಕೆಂದು ಇತ್ತೀಚೆಗೆ ಆದೇಶಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿದ್ದರು.

ಆರು ವಾರಗಳ ಗಡುವು ನೀಡಿದ್ದ ಕೋರ್ಟ್
ರಾಜ್ಯದಲ್ಲಿಆರು ವಾರದೊಳಗೆ ಓಲಾ, ಉಬರ್‌, ರಾರ‍ಯಪಿಡೋ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌, ರಾಜ್ಯ ಸರಕಾರಕ್ಕೆ ಏಪ್ರಿಲ್‌ 2ರಂದು ನಿರ್ದೇಶನ ನೀಡಿತ್ತು.

ಅಲ್ಲದೆ, ಬೈಕ್‌ ಸಿಟಿ ಕಾರ್ಯಾಚರಣೆ ಸಂಬಂಧ ಮೂರು ತಿಂಗಳಲ್ಲಿ ಮೋಟಾರು ವಾಹನ ಕಾಯಿದೆಯ ಅನುಸಾರ ಹೊಸ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸರಕಾರಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಈವರೆಗೆ ಬೈಕ್‌ ಸಿಟಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದ ಅಗ್ರಿಗೇಟರ್‌ ಕಂಪನಿಗಳಿಗೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿತ್ತು.

ಮೋಟಾರ್‌ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022ರಲ್ಲಿಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಧಿಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈ. ಲಿ., ಎಎನ್‌ಐ ಟೆಕ್ನಾಲಜೀಸ್‌, ರೂಪೇನ್‌ ಟ್ರಾನ್ಸ್‌ಪೋರ್ಟ್‌ ಪ್ರೈ. ಲಿ. ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎಂ. ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿತ್ತು.

ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ‘ರಾಜ್ಯ ಸರಕಾರ ಬೈಕ್‌ ಟ್ಯಾಕ್ಸಿಗಳಿಗೆ ಯಾವುದೇ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. 1988ರ ಮೋಟಾರು ವಾಹನ ಕಾಯಿದೆಯ ಸೆಕ್ಷನ್‌ 3ರಡಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹೀಗಾಗಿ, ಆರು ವಾರಗಳ ಒಳಗೆ ಎಲ್ಲಾ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಸರಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.

2022ರಲ್ಲಿ ಮೋಟಾರ್‌ ಬೈಕ್‌ ಟ್ಯಾಕ್ಸಿಗಳಿಗೆ ಅನುಮತಿ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಾಲಯ ಮಧ್ಯಂತರ ಆದೇಶದ ಮೂಲಕ ಅರ್ಜಿದಾರರ ಕಂಪನಿಗಳು ನಡೆಸುತ್ತಿರುವ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆಯ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಿತ್ತು.

Show More

Related Articles

Leave a Reply

Your email address will not be published. Required fields are marked *

Back to top button