AggregatorStateTourismTransport

Bike Taxi Service: ಬೈಕ್ ಟ್ಯಾಕ್ಸಿ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು; 10 ಮಂದಿ ವಿರುದ್ಧ ಎಫ್‌ಐಆರ್‌

Bike Taxi Service: ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬೇಕು. ಅದು ಬಹಳಷ್ಟು ಉದ್ಯೋಗಗಳನ್ನು ಒದಗಿಸುತ್ತಿದೆ ಮತ್ತು ನಾಗರಿಕರಿಗಾಗಿ ಬಹಳ ಉಪಯುಕ್ತ ಸೇವೆ ಎಂದು ಉದ್ಯಮಿ ಮೋಹನ್ ದಾಸ್ ಪೈ ಅವರು ಹೇಳಿದ್ದರು. ಇದಕ್ಕೆ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಆಕ್ರೋಶ ಹೊರಹಾಕಿದೆ.
ಬೈಕ್ ಟ್ಯಾಕ್ಸಿ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ (Bike Taxi Service) ನಿಷೇಧ ವಿಚಾರವಾಗಿ ಪರ ವಿರೋಧ ಚರ್ಚೆಗಳು ಜೋರಾಗಿವೆ. ಈ ಮಧ್ಯೆ ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದ ಉದ್ಯಮಿ ಮೋಹನ್ ದಾಸ್ ಪೈ (TV Mohandas Pai) ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ದೂರು ದಾಖಲಿಸಿದೆ. ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಈ ವೇಳೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, ಕಳೆದ ಏಪ್ರಿಲ್‌ನಲ್ಲಿ ಹೈಕೋರ್ಟ್ ಬೈಕ್ ಟ್ಯಾಕ್ಸಿ ರದ್ದು ಮಾಡಿ ಆದೇಶ ಮಾಡಿದೆ. ಆದರೂ ಉಲ್ಲಂಘನೆ ಮಾಡಿ ಪರೋಕ್ಷವಾಗಿ ಬೈಕ್ ಟ್ಯಾಕ್ಸಿ ಓಡಿಸಲಾಗುತ್ತಿದೆ. ಈ ಮಧ್ಯೆ ಉದ್ಯಮಿ ಮೋಹನ್ ದಾಸ್ ಪೈ ಅವರು ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಇವರಿಗೆ ಕಾನೂನಿನ ಕನಿಷ್ಠ ಜ್ಞಾನ ಇಲ್ಲವೇ? ನ್ಯಾಯಾಲಯದ ಆದೇಶ ಇದ್ದರೂ ಬೈಕ್ ಟ್ಯಾಕ್ಸಿ ಪರ ಟ್ವೀಟ್ ಮಾಡಿ ಪ್ರವೋಕ್ ಮಾಡಿದ್ದಾರೆ. ಬನ್ನಿ ಚರ್ಚೆ ಮಾಡೋಣ. ಬೈಕ್ ಟ್ಯಾಕ್ಸಿಯಿಂದ ಏನೆಲ್ಲಾ ಸಮಸ್ಯೆಗಳು ಆಗುತ್ತೆ ಎಂದು ಹೇಳುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ಕೆಲವು ಬೈಕ್ ಟ್ಯಾಕ್ಸಿ ಚಾಲಕರು, ಫ್ರೀಡಂ ಪಾರ್ಕ್ ಬಿಟ್ಟು ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂಬುದು ಗೊತ್ತಿದ್ದರೂ, ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದು ಕಾನೂನಿನ ಉಲ್ಲಂಘನೆ. ಟ್ವೀಟ್ ಮಾಡಿದ ಮೋಹನ್ ದಾಸ್ ಪೈ ಹಾಗೂ ಪ್ರತಿಭಟನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಿದ್ದೇನೆ. ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.

ಬೈಕ್ ಟ್ಯಾಕ್ಸಿ ನಿಂತ ಮೇಲೆ ಆಟೋದವರು ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ರೀತಿ ಇದ್ದರೆ ರಿಯಾಲಿಟಿ ಚೆಕ್ ಆಗಲಿ, ಅವರ ವಿರುದ್ಧ ಕ್ರಮ ಆಗಲಿ. ದರ ನಿಗದಿ ಡ್ರೈವರ್‌ಗಳ ಕೈಯಲ್ಲಿ ಇಲ್ಲ. ಎಲ್ಲವೂ ಆಪ್ ಕಾರ್ಪೋರೇಟ್ ಕಂಪನಿಗಳ ಕೈಯಲ್ಲಿದೆ. ಸರ್ಕಾರದ ದರವನ್ನು ಆರ್‌ಟಿಒ ಜಾರಿ ಮಾಡಲಿ. ಅದರ ಉದ್ದೇಶ ನಿಜಕ್ಕೂ ಇದ್ದರೆ ಸಾರಿಗೆ ಇಲಾಖೆ ಕಾರ್ಪೋರೇಟ್ ಕಂಪನಿಗಳ ವಿರುದ್ಧ ದೂರು ನೀಡಲಿ. ಕಾನೂನು ವಿರುದ್ಧ ಹೇಳಿಕೆ ಕೊಡುವವರ ವಿರುದ್ಧ ಕ್ರಮ ಆಗಬೇಕು. ನ್ಯಾಯಾಲಯದ ಆದೇಶ ಇರುವುದರಿಂದ ಯಾವ ಪ್ರತಿಭಟನೆ ಆಗಿಲ್ಲ. ಬೈಕ್ ಟ್ಯಾಕ್ಸಿಯವರು ಬೇಕಾದರೆ ಸುಪ್ರೀಂ ಕೋರ್ಟ್‌ಗೆ ಹೋಗಲಿ, ಅಲ್ಲಿ ಡಿಸೈಡ್ ಆಗಲಿ ಎಂದು ಕಿಡಿಕಾರಿದರು.

10 ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಎಫ್‌ಐಆರ್‌
ಬೈಕ್ ಟ್ಯಾಕ್ಸಿ ಸೇವೆ ವಿರೋಧಿಸಿ ವಿಧಾನ ಸೌದದ ಮುಂದೆ ಪ್ರತಿಭಟನೆ ನಡೆಸಿದ 10 ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೈಕ್‌ ಟ್ಯಾಕ್ಸಿ ಬೆಂಬಲಿಸಿದ ಮೋಹನ್‌ದಾಸ್ ಸೇರಿ ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ನಟರಾಜ ಶರ್ಮಾ ದೂರು ನೀಡಿದ್ದರು. ಈ ಸಂಬಂಧ ಬೈಕ್‌ ಟ್ಯಾಕ್ಸಿ ಚಾಲಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button