
ಪ್ರಧಾನಿ ನರೇಂದ್ರ ಮೋದಿ (Narendra Modi) ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು (Bengaluru) ಹಾಗೂ ತುಮಕೂರು (Tumkur) ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್‌ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ಸಮವಸ್ತç ಬಿಡುಗಡೆ ಮಾಡಲಿದ್ದಾರೆ.
ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್‌ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಬಳಿಕ ತಿಪಟೂರು, ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರು ಒದಗಿಸುವ 2 ಜಲಜೀವನ್ ಮಿಶನ್ (Jal Jeevan Mission) ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಒಟ್ಟಿನಲ್ಲಿ ಒಂದೇ ದಿನದಲ್ಲಿ 6 ಕಾರ್ಯಕ್ರಮಗಳಲ್ಲಿ ಮೋದಿ ಮೋದಿ ಭಾಗಿಯಾಗಲಿದ್ದಾರೆ.